ಉಡುಪಿ, ಅಕ್ಟೋಬರ್ 21: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯು ಅಕ್ಟೋಬರ್ 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.