ಹೆಬ್ರಿ :ಅಕ್ಟೋಬರ್ 22:ದ್ರಶ್ಯ ನ್ಯೂಸ್ :ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ
ಮೃತಪಟ್ಟವರು,ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಎಂದು ತಿಳಿದು ಬಂದಿದೆ
ಇವರು ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.