ಮೈಸೂರು: ಅಕ್ಟೋಬರ್: 23: ದೃಶ್ಯ ನ್ಯೂಸ್ : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 24 ರಂದು ಮಧ್ಯಾಹ್ನ 1.46 ರಿಂದ 2.08 ವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮೈಸೂರಿನ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಪೂಜೆಯನ್ನು ಹಮ್ಮಿಕೊಂಡಿದ್ದು ಹಾಗೂ ಅರಮನೆಯ ಒಳ ಆವರಣದಲ್ಲಿ ಸಂಜೆ 4:40 ರಿಂದ 5 ಗಂಟೆವರೆಗೆ ಸಲುವ ಶುಭ ಮೀನ ಲಗ್ನದಲ್ಲಿ ವಿಶ್ವ ವಿಖ್ಯಾತ ವಿಜಯದಶಮಿ ಮೆರವಣಿಗೆಗೆ ಗಣ್ಯರಿಂದ ಚಿನ್ನದ ಅಂಬಾರಿಗೆ ಪುಷ್ವಾರ್ಚನೆಯ ಮೂಲಕ ಚಾಲನೆ ನೀಡಲಾಗುತ್ತದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೆರವೇರಿಸಲಿದ್ದು. ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ರಾಜ ವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಗಿ , ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್ ಭಾಗವಹಿಸಲಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅಕ್ಟೋಬರ್ 24 ರಂದು ಸಂಜೆ 7:30ಕ್ಕೆ ಮೈದಾನದಲ್ಲಿ ಪಂಜಿನ ಕವಾಯತು (ಟಾರ್ಚ್ ಲೈಟ್ ಫೇರೆಡ್) ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ , ಕೇಂದ್ರ ವಿತ್ತ ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯೋಮ ಎಲೆಕ್ಟ್ರಾನಿಕ್ಸ್ ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ್ ಖೂಬಾ ಘನ ಉಪಸ್ಥಿತಿಯಲ್ಲಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ವಹಿಸಲಿದ್ದಾರೆ.