ಬೆಂಗಳೂರಿನಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದೆ. ಮಾರುಕಟ್ಟೆ, ಜನಸಂದಣಿಯಿದ್ದ ಪ್ರದೇಶದಲ್ಲಿ ಮಾರಾಟವಾಗದೇ ಉಳಿದ ಬಾಳೆಕಂಬ, ಬೂದುಗುಂಬಳ ಅಲ್ಲಲ್ಲೇ ಬಿದ್ದಿದೆ,ಸಾಮಾನ್ಯ ದಿನಗಳಲ್ಲಿ ನಗರದಲ್ಲಿ 4,000 ಟನ್ ತ್ಯಾಜ್ಯ ಉತ್ಪತ್ತಿಯಾದರೆ, ಹಬ್ಬದ ಸಂದರ್ಭದಲ್ಲಿ ಶೇ. 20ರಿಂದ ಶೇ. 30ರಷ್ಟು ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದೆ
ಹಬ್ಬದ ನಂತರ ಉಳಿಯುವ ವಸ್ತುಗಳನ್ನು ರಸ್ತೆಯಲ್ಲೇ ರೈತರು ಮತ್ತು ವ್ಯಾಪಾರಿಗಳು ರಾಶಿ ಹಾಕಿ ಹೋಗಿದ್ದಾರೆ. ಹೀಗಾಗಿ ರಸ್ತೆ ರಸ್ತೆಗಳಲ್ಲಿ ಬಾಳೆ ಕಂಬ, ಬೂದುಕುಂಬಳಕಾಯಿ, ಮಾವಿನ ಸೊಪ್ಪಿನ ಕಸ ಕಂಡು ಬರುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ