ಉಚ್ಚಿಲ: ಅಕ್ಟೋಬರ್ 25: ದೃಶ್ಯ ನ್ಯೂಸ್ : ಉಚ್ಚಿಲ ಬಡಾ ಗ್ರಾಮ ಪಂಚಾಯತಿಗೆ ಸುಸಜ್ಜಿತ ಆಂಬುಲೆನ್ಸ್ ನ್ನು ಉಚ್ಚಿಲ ಮಹಾಲಕ್ಷ್ಮಿ ದೇವಳದ ಆವರಣದಲ್ಲಿ ಮುಂಬೈ ಉದ್ಯಮಿ ಹಾಗೂ ಉಚ್ಚಿಲ ಬಡಾ ಗ್ರಾಮದಲ್ಲಿ ರೆಸಾರ್ಟ್ ಹೊಂದಿರುವ ಕರುಣಾಕರ ಶೆಟ್ಟಿಯವರು ಹಸ್ತಾಂತರ ಮಾಡಿದರು.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ರವರು ಉಚ್ಚಿಲ ಬಡ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ರವರಿಗೆ ಆಂಬುಲೆನ್ಸ್ ಕೀ ನೀಡಿ, ಗ್ರಾಮ ಪಂಚಾಯತ್ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭ ಆಂಬುಲೆನ್ಸ್ ದಾನಿ ಕರುಣಾಕರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಗಂಗಾಧರ ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್, ಬಡಾ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.