ಉಳ್ಳಾಲ, ಅಕ್ಟೋಬರ್ 25:ದ್ರಶ್ಯ ನ್ಯೂಸ್ :ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮೃತ ಮಹಿಳೆ ಬಾಗಲಕೋಟೆ ಮೂಲದವರಾಗಿದ್ದು ಸದ್ಯ ಬಬ್ಬುಕಟ್ಟೆಯಲ್ಲಿ ವಾಸವಿದ್ದ ಎಲ್ಲಮ್ಮ(45) ಎಂದು ಗುರುತಿಸಲಾಗಿದೆ ಇವರು ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿಗೆ ಹೋಗಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.
ದೇರಳಕಟ್ಟೆ ಕಡೆಯಿಂದ ಆಗಮಿಸಿದ ದೈಗೋಳಿ ನಿವಾಸಿ ಗಗನ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಲ್ಲಮ್ಮರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ ಎಲ್ಲಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೈಕ್ ಸವಾರ ಗಗನ್ ಕೂಡಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ