ನವದೆಹಲಿ :ಅಕ್ಟೋಬರ್ 26: ದ್ರಶ್ಯ ನ್ಯೂಸ್ :ಅಕ್ಟೋಬರ್ 26 ರಿಂದ 27 ರವರೆಗೆ ಕರ್ನಾಟಕ ಮತ್ತು ತಮಿಳುನಾಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ ಎಂದು ಬುಧವಾರ ರಾಷ್ಟ್ರಪತಿ ಭವನ ದ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಇಂದು ಬೆಂಗಳೂರಿನಲ್ಲಿ ಪ್ರತಿಷ್ಠಾನ ಸಪ್ತಾಹವನ್ನು ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ.
ಅವರು ಬೆಂಗಳೂರಿನ ಐಐಎಂನಲ್ಲಿ ಎನ್ ಎಸ್ ರಾಘವನ್ ಉದ್ಯಮಶೀಲತಾ ಕಲಿಕೆ ಕೇಂದ್ರದ ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 27 ರಂದು ಮುರ್ಮು ಅವರು ತಮಿಳುನಾಡಿನ ಚೆನ್ನೈನಲ್ಲಿ ಇಂಡಿಯನ್ ಮ್ಯಾರಿಟೈಮ್ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ