ಬೆಂಗಳೂರು;ಅಕ್ಟೋಬರ್ 26:ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜಧಾನಿ ಬೆಂಗಳೂರಿಗೆ ಆಗಮಿಸಿದರು.
ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು