ಬೆಂಗಳೂರು : ಅಕ್ಟೋಬರ್ 29: ನವೆಂಬರ್ ಮೊದಲ ವಾರ ಮತ್ತೊಮ್ಮೆ ಪಡಿತರ ಚೀಟಿ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೇ ಎನ್ನಲಾಗಿದ್ದು, ಬಹುಶಃ ನವೆಂಬರ್ 1 ರಿಂದ ಪಡಿತರ ಚೀಟಿದಾರರಿಗೆ ದಾಖಲೆ ಸರಿಪಡಿಸಿಕೊಳ್ಳಲು ಅವಕಾಶ ಸಿಗಲಿದೆ ಅಂತ ತಿಳಿದು ಬಂದಿದೆ.ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಹೆಚ್ಚಿನ ಸಮಯ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಸಮಯವನ್ನು ವಿಸ್ತರಿಸಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
ಈ ಕೆಳಗಿನವುಗಳ ತಿದ್ದುಪಡಿ ಮಾಡಬಹುದಾಗಿದೆ.
ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು ಸೇರಿದೆ
ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ
ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.