ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠಿರವ ಸ್ಟುಡಿಯೋಕ್ಕೆ ಅಪಾರ ಜನಸಂಖ್ಯೆಯಲ್ಲಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಬೆಳ್ಳಂ ಬೆಳಗ್ಗೆ ಆಗಮಿಸಿ ಅಪ್ಪು ಸಮಾಧಿ ದರ್ಶನ ಪಡೆಯುತ್ತಿದ್ದಾರೆ..
ಕುಟುಂಬಸ್ಥರು ಅಪ್ಪು ಸಮಾಧಿಗೆ ಇಂದು ಪೂಜೆ ಸಲ್ಲಿಸಲಿದ್ದಾರೆ.ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕವನ್ನು ಬಿಳಿ ಮಾರ್ಬಲ್ಸ್ ನಲ್ಲಿ ನಿರ್ಮಾಣ ಮಾಡಲಾಗಿದೆ. ರಾಜ್‌ಕುಮಾರ್ ಅವರ ಸ್ಮಾರಕದ ಬಳಿಯೇ ಅಪ್ಪು ಸಮಾಧಿ ಇದ್ದು, ಬೆಳಗ್ಗೆಯಿಂದಲೇ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಇಂದು ಬೆಳಿಗ್ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ಮಕ್ಕಳು ಅಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಸೇರಿ ಹಲವು ಕುಟಂಬಸ್ಥರು ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲಿದ್ದಾರೆ.
ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಲವು ಸೇವಾ ಕಾರ್ಯಕ್ರಮಗಳ ಮೂಲಕ ನೆಚ್ಚಿನ ನಟನಿಗೆ ಗೌರವ ಸಲ್ಲಿಸುತ್ತಿದ್ದಾರೆ.