ಇಂದು ದೆಹಲಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ನಡೆಯಲಿದ್ದು, ದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಿಡಬ್ಲ್ಯೂಆರ್‌ಸಿ ಸಭೆ ನಡೆಯಲಿದೆ. ಮುಂದಿನ ಅವಧಿಗೆ ನೀರುಹರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಕಳೆದ ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಹಾಗೂ 29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಹಾಗೂ ರೈತ ಪರ ಸಂಘಟನೆಗಳು ಕರೆ ನೀಡಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಪ್ರತಿಭಟನೆಯನ್ನು ನಡೆಸಿದ್ದವು. ಅದರ ಬೆನ್ನಲ್ಲೇ ಸಿಡಬ್ಲ್ಯೂಆರ್‌ಸಿ ಕರ್ನಾಟಕಕ್ಕೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ್ದು ಹೋರಾಟಗಾರರಲ್ಲಿ ಆಕ್ರೋಶ ಹೆಚ್ಚಿಸಿತ್ತು.
ಸಿಡಬ್ಲ್ಯೂಆರ್‌ಸಿ ಆದೇಶ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಮಂಡಳಿ ಸಭೆ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ನೀರು ಹರಿಸಬೇಕbಅಥವಾ ಹರಿಸಬಾರದ ಎನ್ನುವ ಕುರಿತು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.