ಬೆಳ್ತಂಗಡಿ :ಅಕ್ಟೋಬರ್ 30:ದ್ರಶ್ಯ ನ್ಯೂಸ್ : ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎನ್ನಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿ. ಈ ಕುರಿತು ಇಂದು ಸೋಮವಾರ ಬೆಳಗ್ಗೆ ಪ್ರಕರಣ ದಾಖಲಾಗಿದೆ.
ರಾತ್ರಿಯ ವೇಳೆ ತಂದೆ ಹಾಗೂ ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ.
ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಾಗಿಲು ತೆಗೆದ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾನೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ