ಉಳ್ಳಾಲ : ನೇತ್ರಾವತಿ ಸೇತುವೆ ಇದೀಗ ಮತ್ತೆ ಯುವಕನೋರ್ವನ ಆತ್ಮಹತ್ಯೆಯಿಂದ ಸುದ್ಧಿಯಾಗಿದೆ.
ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರ ಆತ್ಮಹತ್ಯೆಯಿಂದ ಮತ್ತೆ ಆತಂಕ ಮೂಡಿಸಿದೆ.
ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.