ಉಡುಪಿ:ಅಕ್ಟೋಬರ್ 31:ದ್ರಶ್ಯ ನ್ಯೂಸ್ :ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ “ಏಕಲವ್ಯ ಪ್ರಶಸ್ತಿ “ಗೆ ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 25 ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820- 2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ