ಕಾರ್ಕಳ : ಅಕ್ಟೋಬರ್ 31: ದ್ರಶ್ಯ ನ್ಯೂಸ್ :ಹಿರಿಯ ಪತ್ರಕರ್ತ,ಸಾಹಿತಿ, ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು.
ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ ಅಜೆಕಾರು ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದವರು, ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು. ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ಇತ್ತೇಚೆಗಿನ ಕೆಲವು ವರ್ಷಗಳಿಂದ ಪತ್ರಿಕೋದ್ಯಮ ಬಿಟ್ಟು ಪೂರ್ಣವಾಗಿ ಸಾಹಿತ್ಯ ಮತ್ತು ಸಂಘಟನೆಯ ಕೆಲಸಗಳಲ್ಲಿ ತೊಡಗಿದ್ದರು.
ಇವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರಾಷ್ಟ್ರೀಯ ಬಸವಶ್ರೀ ವಾರ್ಡ್ 2018, ಆಮಂತ್ರಣ ಪ್ರಶಸ್ತಿ 2019, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದರು
ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ