ಉಡುಪಿ,:ನವೆಂಬರ್ 02: ದ್ರಶ್ಯ ನ್ಯೂಸ್: ಜಿಲ್ಲಾಡಳಿತ, ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಉಡುಪಿ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯ ದಲ್ಲಿ ಹಮ್ಮಿಕೊಳ್ಳಲಾದ 14 ರ ವಯೋಮಾನದ ಶಾಲಾ ಬಾಲಕ-ಬಾಲಕಿಯರ ಮೂರು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅಜ್ಹರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಿನ್ನೆ ನವೆಂಬರ್ 01 ಬುಧವಾರ ಚಾಲನೆ ನೀಡಲಾಯಿತು.
ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜೆ. ಕ್ರಾಸ್ತಾ ಕ್ರೀಡಾಪಟುಗಳೊಂದಿಗೆ ಸೇರಿ ಕ್ರೀಡಾಕೂಟ ವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿದರು. ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್ ಶುಭ ಹಾರೈಸಿದರು.
ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತರಾದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಿಜೋ ಚಾಕೋ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಸ್ವಾಗತಿಸಿ, ವಿದ್ಯಾರ್ಥಿನಿ ಶಾಲಿಕಾ ಹಾಗೂ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನ ನಗರದ ಮದರ್ ಆಫ್ ಸಾರೋಸ್ ಚರ್ಚ್ ಮುಂಭಾಗದಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್ ಭವ್ಯ ಮೆರವಣಿಗೆ ನಡೆಯಿತು. ಸ್ಥಳೀಯ ಜನಪದ ಕಲಾತಂಡ, ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಾ ಕ್ರೀಡಾಕೂಟದ ರಂಗು ಹೆಚ್ಚಿಸಿತು. ಉದ್ಘಾಟನೆ ಕಾರ್ಯಕ್ರಮ ಬಳಿಕ ವಿವಿಧ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ ಕಣ್ಮನ ಸೆಳೆಯಿತು
ಶಾಸಕ ಯಶಪಾಲ್ ಎ. ಸುವರ್ಣ, ಜಿಲ್ಲಾಕಾರಿ ಡಾ.ಕೆ. ವಿದ್ಯಾ ಕುಮಾರಿ, ಜಿ.ಪಂ . ಸಿಇಒ ಪ್ರಸನ್ನ ಎಚ್., ಉಡುಪಿ ಕ್ಷೇತ್ರ ಶಿಕ್ಷಣಾಕಾರಿ ಡಾ. ಅಶೋಕ್ ಕಾಮತ್, ಜಿಲ್ಲಾ ದೈಹಿಕ ಶಿಕ್ಷಣ ಅಕಾರಿ ಗೋಪಾಲ ಶೆಟ್ಟಿ ಎಚ್., ಸೈಂಟ್ ಸಿಸಿಲೀಸ್ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ತೆರೇಸಾ ಜ್ಯೋತಿ, ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಸೊಹೇಲ್ ಅಮೀನ್, ದೈಹಿಕ ಶಿಕ್ಷಣ ಶಿಕ್ಷಕರಾದ ಎಡ್ವಿನ್ ಮೆಂಡೋನ್ಸ, ದಿನೇಶ್ ಕುಮಾರ್ ಉಪಸ್ಥಿತರಿದ್ದರು