ನವದೆಹಲಿ : ನವೆಂಬರ್ 03:ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸಭೆ ನಡೆಯಲಿದೆ.
ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನಡೆದ ಸಭೆಯಲ್ಲಿ ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ 2600 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWMA ಆದೇಶ ನೀಡಿತ್ತು
ಈ ಆದೇಶವನ್ನು ವಿರೋಧಿಸಿ ಮಂಡ್ಯದಲ್ಲಿ ರೈತ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ ಈಗಾಗಲೇ ಸುಮಾರು ಎರಡು ತಿಂಗಳಿಗಿಂತಲೂ ಹೆಚ್ಚು ಮಂಡ್ಯದಲ್ಲಿ ರೈತರು ಹಾಗೂ ಇತರೆ ಸಂಘಟನೆಗಳು, ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸುತ್ತಿವೆ