ಕುಂದಾಪುರ, ನ.3: ನ.7 ಹಾಗೂ 8ರಂದು ಬಿಸಿಯೂಟ ಬಂದ್ ಮಾಡಿ ಬೆಂಗಳೂರಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಬಿಸಿಯೂಟ ನೌಕರರು ಭಾಗವಹಿಸುವುದಾಗಿ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷೆ ಜಯಶ್ರೀ, ಬೈಂದೂರು ತಾಲೂಕು ಅಧ್ಯಕ್ಷೆ ಸಿಂಗಾರಿ ನಾವುಂದ, ಕಾರ್ಯದರ್ಶಿ ನಾಗರತ್ನಾ ತಿಳಿಸಿದ್ದಾರೆ.
ಬಿಸಿಯೂಟ ನೌಕರರು ಹಲವಾರು ವರ್ಷಗಳಿಂದ ಬೇಡಿಕೆಗಳ ಬಗ್ಗೆ ಮನವಿ ನೀಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಹೋರಾಟ, ಬೆಳಗಾವಿ ಸುವರ್ಣಸೌಧ ಎದುರು ನಡೆದ ಹೋರಾಟ ಸಂದರ್ಭದಲ್ಲಿ ಈ ಸಮಸ್ಯೆ ಬಗೆಹರಿಸುವುವ ನಿಟ್ಟಿನಲ್ಲಿ ಭರವಸೆ ನೀಡಲಾಗಿತ್ತು.
ಆದರೆ ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಅನಿವಾರ್ಯ ವಾಗಿ ಅ.30ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ
ಅನಿರ್ದಿಷ್ಟಾ ವಧಿ ಹೋರಾಟ ನಡೆಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ