ಮಣಿಪಾಲ: ನವೆಂಬರ್ : 07: ದೃಶ್ಯ ನ್ಯೂಸ್ : ಹೆರ್ಗಾ ಗ್ರಾಮದ ಸರಳೇಬೆಟ್ಟು ಹೈಪಾಯಿಂಟ್ ಹೈಟ್ಸ್ ವಸತಿ ಸಮುಚ್ಚಯದಿಂದ ಹಾರಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಪ್ಲಾಟ್‌ನ 8ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.
ಪ್ರಜ್ಞಾ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ರವಿವಾರ ಬೆಳಿಗ್ಗೆ 6.20ಕ್ಕೆ ವಸತಿ ಸಮುಚ್ಚಯದ ಎಂಟನೇ ಮಹಡಿಯಿಂದ ಹಾರಿದ್ದಳು. ತಕ್ಷಣ ಮನೆಯವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಗಂಭೀರ ಗಾಯಗೊಂಡ ಪ್ರಜ್ಞಾ ಚಿಕಿತ್ಸೆಗೆ ಸ್ಪಂದಿಸದೇ ಸಂಜೆ 7:45 ಗಂಟೆಗೆ ಕೊನೆಯುಸಿರೆಳೆದಿದ್ದಾಳೆ ಎಂದು ಮಣಿಪಾಲ ಪೊಲೀಸರು ಮಾಹಿತಿ ನೀಡಿದ್ದಾರೆ.