ಮಂಗಳೂರು:ನವೆಂಬರ್ 9:ದ್ರಶ್ಯ ನ್ಯೂಸ್ ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೋರ್ವನಿಂದ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ತಪಾಸಣೆಯ ವೇಳೆ ಪ್ರಯಾಣಿಕನ ಬಳಿ 220 ಗ್ರಾಂ ಚಿನ್ನ ಪತ್ತೆಯಾಗಿದ್ದು, ಅವುಗಳ ಮೌಲ್ಯ 17.49,660 ರೂ. ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕನು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮತ್ತು ಚಿನ್ನದ ಸರಗಳನ್ನು ಒಳ ಉಡುಪು, ಸಾಕ್ಸ್ ಗಳಲ್ಲಿ ಬಚ್ಚಿಟ್ಟು ತಂದಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.