ಮಂಗಳೂರು :ನವೆಂಬರ್ 09:ಮಂಗಳೂರು ನಗರ ಪೊಲೀಸ್ ಘಟಕ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಫೋನ್ ಮೂಲಕ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಬಳಿಕ 11ಗಂಟೆಯಿಂದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ 12 ಗಂಟೆವರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.