ಉಡುಪಿ : ನವೆಂಬರ್ 10: ದ್ರಶ್ಯ ನ್ಯೂಸ್ :ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದರು.
ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ
1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ,ಸರಕಾರದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು. ಪರಿಸರ ಪ್ರೇಮಿಯೂ ,ಕೃಷಿ ಪ್ರೇಮಿಯೂ ಆಗಿದ್ದ ಇವರು ,ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಅಂತ್ಯಕ್ರಿಯು ಕುಂದಾಪುರ ತಾಲೂಕಿನ ಕಮಲ ಶಿಲೆ ಸಮೀಪದ ಎಡಮೊಗೆಯಲ್ಲಿರುವ ಕುಟುಂಬದ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 9.30 ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.