ಕಾರ್ಕಳ :ನವೆಂಬರ್ 10:ದ್ರಶ್ಯ ನ್ಯೂಸ್ :ಕಾರ್ಕಳ ಪುರಸಭಾ ವತಿಯಿಂದ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಷೇಧಿತ ಪಟಾಕಿ ಸಿಡಿಸುವುದರಿಂದ ಶಬ್ದ ಮಾಲಿನ್ಯ, ವಾಯುಮಾಲಿನ್ಯದಿಂದ ಮತ್ತು ಘನತಾಜ್ಯ ವಸ್ತು ಉತ್ಪತ್ತಿಯಾಗಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುತ್ತದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತದೆ. ಆದುದರಿಂದ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವುದು ಹಾಗೂ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಿ ಪರಿಸರ ಮಾಲಿನ್ಯ ಮತ್ತು ಪ್ರಾಣ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಬಸ್ ನಿಲ್ದಾಣದಲ್ಲಿ ಹಸಿರು ಪಟಾಕಿ ಬಳಸುವ ಸಾರ್ವಜನಿಕ ಸಹಿಸಂಗ್ರಹ ಅಭಿಯಾನ ಕಾರ್ಕಳದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಪುರಸಭಾ ಮುಖ್ಯ ಧಿಕಾರಿ ರೂಪಾ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆಯ ಬ್ರ್ಯಾಂಡ್ ಅಂಬಾಸಿಡರ್ ಫೆಲಿಕ್ಸ್ ಮಾಜಿ ಮಾರ್ಷಲ್ ರಮೇಶ್ ಕಾರ್ಣಿಕ್ ಆರ್ಮಿ ಅಧಿಕಾರಿ ವಿಜಯಾನಂದ, ಮಾಜಿ ಏರ್ ಪೋಸ್೯ ಅಧಿಕಾರಿ ಸುಧಾಕರ್, ಸ್ವಚ್ಛ ಬ್ರಿಗೇಡ್ ಕಾರ್ಕಳ, ಜೈನ್ ಬ್ರಿಗೇಡ್, ರೋಟರಿ ಬಾಲ ಭವನ ಪುರಸಭೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.