ಉಡುಪಿ:ನವೆಂಬರ್ 11: ದ್ರಶ್ಯ ನ್ಯೂಸ್ : ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರ ಬಹುದಿನಗಳ ಬೇಡಿಕೆಯಾಗಿದ್ದ ಭಾರತ್ ಗ್ಯಾಸ್ ಗೋಡೌನ್ ನಿಂದ ತೋನ್ಸೆ ಮನೋಹರ್ ಶೆಟ್ಟಿ ಮನೆಗೆ ಹೋಗುವ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಾಗರಾಜ್, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಕಿಶೋರ್, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೃಷ್ಣ ದೇವಾಡಿಗ, ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಸತೀಶ್ ನಾಯ್ಕ್, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಪೂಜಾರಿ ಪ್ರಶಾಂತ್ ಆಚಾರ್ಯ, ಜಾನ್ಸನ್, ಕವಿತಾ ಮೇಸ್ತ ,ಅನಿತಾ ನಾಯ್ಕ್ ಪ್ರಮುಖರಾದ ಶ್ರೀ ಮನೋಹರ್ ಶೆಟ್ಟಿ ತೋನ್ಸೆ, ಶ್ರೀ ಅಮಿತ್ ಪೂಜಾರಿ, ಶ್ರೀ ದಿನಕರ ಮಾಸ್ಟ್ರು, ಶ್ರೀ ಸತೀಶ್ ಶೆಟ್ಟಿ ಕೆಮ್ಮಣ್ಣು, ಸುನೀಲ್ ನೇಜಾರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.