ಉಡುಪಿ:ನವೆಂಬರ್ 11: ದ್ರಶ್ಯ ನ್ಯೂಸ್ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ವೀರ ರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಒನಕೆ ಓಬವ್ವರ ಜೀವನಗಾಥೆ ನಮಗೆಲ್ಲ ಮಾದರಿ ಎಂದು ಹೇಳಿದರು.
ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಸಾಹಿತಿ ಗಣನಾಥ ಎಕ್ಕಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗಣ್ಯರಾದ ಶ್ರೀ ಚಂದ್ರಶೇಖರ್ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಅಶೋಕ್ ಕಾಮತ್, ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.