ಮಂಗಳೂರು : ನವೆಂಬರ್ 24: ದ್ರಶ್ಯ ನ್ಯೂಸ್ : ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಹಕಾರ ಸಂಘಗಳಿಗೆ ಇಲಾಖೆಯಿಂದ ನೀಡಲಾಗುವ ಪ್ರಶಸ್ತಿಯನ್ನು ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ಪಡೆದುಕೊಂಡಿದೆ.
ವಿಧಾನ ಸೌಧದಲ್ಲಿ ಜರಗಿದ ಸಮಾರಂಭದಲ್ಲಿ ಸಹಕಾರ ಸಂಘದ ಅಧ್ಯಕ್ಷ ನಿತಿನ್ ಕುಮಾರ್, ಕಾರ್ಯದರ್ಶಿ ನಾಗೇಶ್ ಬೋಳಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕಲ್ಲಾರೆ, ಸಹಕಾರ ಸಂಘದ ಉಪಾಧ್ಯಕ್ಷ ಹರಿಶ್ಚಂದ್ರ ಮೆಂಡನ್ ಹೊಸಬೆಟ್ಟು, ನಿರ್ದೇಶಕರಾದ ಅನಿಲ್ ಕುಮಾರ್, ಹರಿಶ್ಚಂದ್ರ. ಕೆ. ಪುತ್ರನ್, ಗೋವರ್ಧನ್ ಸಾಲ್ಯಾನ್, ಹರೀಶ್ ಬಿ. ಉಪಸ್ಥಿತರಿದ್ದರು