ಮಂಗಳೂರು: ನವೆಂಬರ್ 24:ದ್ರಶ್ಯ ನ್ಯೂಸ್ :ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ನಡೆದಿದೆ,ಪರಿಣಾಮ ಬೈಕ್ ಸವಾರ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾನೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿಯಾಗಿರುವ ದೀಕ್ಷಿತ್, ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೂಡಲೇ ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ದೀಕ್ಷಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.