ಮಂಗಳೂರು:ನವೆಂಬರ್ 28:ದ್ರಶ್ಯ ನ್ಯೂಸ್ : ಮಂಗಳವಾರ ಬೆಳಗ್ಗೆ ಅತ್ತರವಾರದ ವಸತಿ ಸಮುಚ್ಚಯದ 12ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 9 ಮಂದಿ ವಾಸವಿದ್ದರು ಎನ್ನಲಾಗಿದೆ.
ತುರ್ತು ಕರೆಗೆ ಸ್ಪಂದಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಅಧಿಕಾರಿಗಳು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ