ಬೆಂಗಳೂರು: ನವೆಂಬರ್ 28: ದ್ರಶ್ಯ ನ್ಯೂಸ್ :ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಶೇರ್ ಮಾಡಿರುವಂತ ಅವರು, ನವೆಂಬರ್.29, 2023ರ ನಾಳೆ ಸಂಜೆ ತಾನು ಕುವೆಂಪು ಆಶಯದಂತೆ ಮಂತ್ರ ಮಾಂಗಲ್ಯದ ಮೂಲಕ ವಿಜಯ್ ಘೋರ್ಪಡೆಯೊಂದಿಗೆ ಮದುವೆಯಾಗುತ್ತಿದ್ದೇನೆ ಅಂತ ಹೇಳಿದ್ದಾರೆ.
ನನ್ನ ಮದುವೆಗೆ ಕುಟುಂಬ ಸಮೇತರಾಗಿ ನೀವು ಬಂದು ಹರಸಿ, ಆಶೀರ್ವದಿಸಿ. ಮದುವೆ ಸಮಯದಲ್ಲಿ ಯಾವುದೇ ಕ್ಯಾಮೆರಾಗಳಿಗೆ ಅವಕಾಶವಿರೋದಿಲ್ಲ. ಅನ್ಯಥಾ ಭಾವಿಸಬೇಡಿ. ನಾವೇ ನಿಮಗೆ ಸಾಧ್ಯವಾದಷ್ಟು ಪೋಟೋಗಳನ್ನು ಮತ್ತು ದೃಶ್ಯಗಳನ್ನು ತಲುಪಿಸುತ್ತೇವೆ. ನನ್ನ ಚಿತ್ರ ಜೀವನದ ಎಲ್ಲಾ ಬೆಳವಣಿಗೆಯಲ್ಲಿ ನೀವು ನನ್ನ ಜೊತೆಯಾಗಿದ್ದೀರಿ. ನನ್ನ ಮದುವೆಗೆ ಬಂದು ಹರಸಿ, ಹಾರೈಸಿ ಅಂತ ಕೋರಿದ್ದಾರೆ.
ಅಂದಹಾಗೇ ನಟಿ ಪೂಜಾ ಗಾಂಧಿ ಅವರ ಸಿನಿ ಬದುಕಿಗೆ ತಿರುವು ನೀಡಿದ್ದ ಸಿನಿಮಾ, ಯೋಗರಾಜ್ ಭಟ್ ನಿರ್ದೇಶನದ ‘ಮುಂಗಾರು ಮಳೆ’. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ನಟಿಸಿದರು. ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು.