ಗೋವಾ : ನವೆಂಬರ್ 29: ದ್ರಶ್ಯ ನ್ಯೂಸ್: ಗೋವಾದಲ್ಲಿ 54ನೇ ಅಂತರಾಷ್ಟ್ರೀಯ ಚಿತ್ರೋತ್ಸವ ನಡೀತಿದೆ. ರಿಷಬ್ ಶೆಟ್ಟಿ ಕೂಡ ಈ ಸಿನಿಮಾ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ‘ಕಾಂತಾರ’ ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಸಿಲ್ವರ್ ಪೀಕಾಕ್ ಸ್ಪೆಷಲ್ ಜ್ಯೂರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿ ಆಗೆ ಪ್ರಶಸ್ತಿ ವಿತರಿಸಿದ್ದಾರೆ. ‘ಕಾಂತಾರ’ ಚಿತ್ರದಲ್ಲಿನ ತಮ್ಮ ನಿರ್ದೇಶನ ಹಾಗೂ ನಟನೆಗಾಗಿ ರಿಷಬ್ ಪ್ರಶಸ್ತಿ ಸ್ವೀಕರಿಸಿದ್ದಾರೆ
ಪ್ರತಿಷ್ಠಿತ ಗೋಲ್ಡನ್ ಪೀಕಾಕ್‌ಗಾಗಿ ಪ್ರಶಸ್ತಿಗಾಗಿ 12 ಅಂತರರಾಷ್ಟ್ರೀಯ ಮತ್ತು 3 ಭಾರತೀಯ ಚಲನಚಿತ್ರಗಳನ್ನು ಒಳಗೊಂಡ ಒಟ್ಟು 15 ಚಿತ್ರಗಳು ಸ್ಪರ್ಧಿಸಿದ್ದವು. ಪ್ರಶಸ್ತಿ ಸಿಕ್ಕ ಬಗ್ಗೆ ಹೊಂಬಾಳೆ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ ಸಿನಿಮಾ ಹೊಸ ಇತಿಹಾಸ ನಿರ್ಮಿಸಿದೆ ಎಂದಿದೆ. ರಿಷಬ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.