ಮಂಗಳೂರು:ನವೆಂಬರ್ 30: ದ್ರಶ್ಯ ನ್ಯೂಸ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವಜನ ಒಕ್ಕೂಟ, ಮಂಗಳೂರು ತಾಲೂಕು ಯುವಜನ ಒಕ್ಕೂಟ, ಉಳ್ಳಾಲ ನಗರಸಭೆ ಹಾಗೂ ಶೃತಿಲಯಕಲಾ ಕೇಂದ್ರ ಕುತ್ತಾರು ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಡಿ.2ರಂದು ಬೆಳಗ್ಗೆ 9 ಗಂಟೆಗೆ ಉಳ್ಳಾಲ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿ ವಹಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು.
ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಗೌರವ ಉಪಸ್ಥಿತಿ ವಹಿಸಲಿದ್ದಾರೆ.