ಉದ್ಯಾವರ:ನವೆಂಬರ್ 30: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಯ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಬೆಂಬಲದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 12ನೇ ವಾರ್ಡ್ನ ಮಾಲತಿ ಸಂದೀಪ್ ಮತ್ತು ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಗಿರೀಶ್ ಸುವರ್ಣ ಉದ್ಯಾವರ
ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ರೋಯ್ಸ್ ಫೆರ್ನಾಂಡೀಸ್, ನಾಗೇಶ್ ಕುಮಾರ್ ಉದ್ಯಾವರ ಮತ್ತು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.