ಕುಂದಾಪುರ:ಡಿಸೆಂಬರ್ 01: ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೃತರನ್ನು ಹಕ್ಲಾಡಿ ಸಮೀಪದ ತೊಪ್ಪು ನಿವಾಸಿ ಮಹಾಬಲ ಪೂಜಾರಿ(48) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಚಾಲಕರಾಗಿರುವ ಇವರು ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದಾಗ ಇವರ ಬೈಕಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ
ಇದರಿಂದ ಮಹಾಬಲ ಪೂಜಾರಿ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.