ಉಡುಪಿ : ಡಿಸೆಂಬರ್ 01: ದ್ರಶ್ಯ ನ್ಯೂಸ್ : ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಹಾಗೂ ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು
ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾ ಕುಮಾರಿ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್., ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲಾ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀ ಕುಮಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.