ಬೆಂಗಳೂರು : ಡಿಸೆಂಬರ್ 01:ಶಾಲೆಗಳಿಗೆ ಬಂದಿರುವ ಬಂದಿರುವ ಬಾಂಬ್ ಬೆದರಿಕೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಘಟನೆಗೆ ಸಂಬಂಧಪಟ್ಟಂಥೆ ಸೂಕ್ತ ಕ್ರಮ ಕೈಗೊಳ್ಳವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಹೇಳಿದರು.
ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿವೆ. ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸುತ್ತಿದ್ದಾರೆ.