ಉಡುಪಿ: ಡಿಸೆಂಬರ್ 2:ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿ. ಉಡುಪಿ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ ಸೌಹಾರ್ದ ಸಂಭ್ರಮ 2023 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಸಮಾರಂಭದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ಶ್ರೀ ಮಂಜುನಾಥ ಎಸ್.ಕೆ. ಹಾಗೂ ಸಹಕಾರಿ ಮುಖಂಡರು ಉಪಸ್ಥಿತರಿದ್ದರು.