ಬ್ರಹ್ಮಾವರ:ಡಿಸೆಂಬರ್ 04: ದ್ರಶ್ಯ ನ್ಯೂಸ್: ಮನೆಯಲ್ಲಿ ಡೆತ್‌ನೋಟ್ ಬರೆದು ಇಟ್ಟು ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ನ.30ರಂದು ಮದ್ಯಾಹ್ನ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಉಪ್ಪಿನಕೋಟೆಯ ಲಲಿತಾ(31) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ