ಕಾಪು:ಡಿಸೆಂಬರ್ 04:ದ್ರಶ್ಯ ನ್ಯೂಸ್ : ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಜಯಗಳಿಸಿದ ಖುಷಿಯಲ್ಲಿ ಕಾಪುವಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಶ್ರೀಕಾಂತ ನಾಯಕ್
ಅಧ್ಯಕ್ಷರು ಬಿಜೆಪಿ ಕಾಪು ಕ್ಷೇತ್ರ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಪದಾಧಿಕಾರಿಗಳು, ಪುರಸಭಾ ಸದಸ್ಯರುಗಳು, ಮೋರ್ಚಗಳ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು, ವಿವಿಧ ಜವಾಬ್ದಾರಿ ಹೊಂದಿದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.