ಬೆಳಗಾವಿ : ಡಿಸೆಂಬರ್ 04: ದ್ರಶ್ಯ ನ್ಯೂಸ್ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದೆ ವೇಳೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿರುವ ಘಟನೆ ನಡೆಯಿತು.
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ರಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸುವರ್ಣಸೌಧದ ಎದುರುಗಡೆ ಪ್ರತಿಭಟನೆ ನಡೆಸುತ್ತಿದ್ದು ಇದೇ ವೇಳೆ ರೈತರು ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ರೈತರು ಧಿಕ್ಕಾರ ಕೂಗಿ ಸುವರ್ಣ ಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ
ಇದೆ ವೇಳೆ ಮಾರ್ಗ ಮಧ್ಯೆ ಪೊಲೀಸರು ರೈತರನ್ನು ತಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ.ಬಸ್ ನಲ್ಲಿ ಪ್ರತಿಭಟನಾ ನಿರಂತರನ್ನು ಕರೆದುಕೊಂಡು ಕೊಂಡಸಾಕಪ್ಪ ದಲ್ಲಿರುವ ಪ್ರತಿಭಟನಾ ರೈತರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಅದೇ ರೀತಿಯಾಗಿ ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಹಾಕದೆ ಇರುವ ಕಾರಣಕ್ಕೆ ವಕೀಲ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ವಕೀಲರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಅಲ್ಲದೆ ಎಲ್ಲಾ ಜಿಲ್ಲೆಗಳಲ್ಲಿ ಬಾರ್ ಕೌನ್ಸಿಲ್ ಅಸೋಸಿಯೇಷನ್ ವತಿಯಿಂದ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.