ಬೆಂಗಳೂರು : ಡಿಸೆಂಬರ್ 06: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಇದೇ ವೇಳೆ ಮಾತನಾಡಿ, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ಗಳನ್ನ ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ ಅಂತ ತಿಳಿಸಿದರು, APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, APL ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ
ಎಪಿಎಲ್ ಕಾರ್ಡು ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ 30 ರಷ್ಟು ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಲಿದೆ. ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದಾಗಿದೆ.