ಉಡುಪಿ ;ಡಿಸೆಂಬರ್ 07: ದ್ರಶ್ಯ ನ್ಯೂಸ್ : ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ, ಡಾ. ಶಶಿಕಲಾ ಮೃತ ವೈದ್ಯೆ ಎಂದು ತಿಳಿದು ಬಂದಿದೆ
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದಿದ್ದಾರೆ.. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.