ಬೆಂಗಳೂರು :ಡಿಸೆಂಬರ್ 10:ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯವು ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ ವತಿಯಿಂದ “ಹದಿನಾಲ್ಕು ವಾರದ ಬೇಕರಿ ಟೆಕ್ನಾಲಜಿ ಕುರಿತು ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಿದೆ
ಎಸ್.ಎಸ್.ಎಲ್.ಸಿ. ಪಾಸ್ / ಫೇಲ್ ಆಗಿರುವವರು ರೂ.10/- ಸಂದಾಯಿಸಿ ಅರ್ಜಿ ಫಾರಂಗಳನ್ನು ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವ ವಿದ್ಯಾನಿಲಯ, ಜಿಕೆವಿಕೆ ಬೆಂಗಳೂರು-560065 ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 20 ರೊಳಗೆ ಅಪರಾಹ್ನ 4 ಗÀಂಟೆಯೊಳಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23513370 / 8971402077 ಗೆ ಸಂರ್ಪಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ