ಕೊಚ್ಚಿ : ಡಿಸೆಂಬರ್ 10:ಕೇರಳದ ಎರ್ನಾಕುಲಂ ಜಿಲ್ಲೆಯ ಸಮೀಪದ ಆಲುವಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ತನ್ನ ಸಾವಿನ ಬಗ್ಗೆ ಪೋಸ್ಟ್ ಹಾಕಿದ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಶುಕ್ರವಾರ ಸಂಜೆ 6.30ರ ಸುಮಾರಿಗೆ ಅಜ್ಮಲ್ ಶೆರೀಫ್ ಎಂಬ ವ್ಯಕ್ತಿ ತನ್ನ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ
ಉತ್ತಮ ಕೆಲಸ ಸಿಗದ ಕಾರಣ ಆತ ಕೊಂಚ ಖಿನ್ನತೆಗೆ ಒಳಗಾಗಿದ್ದ ಎಂದು ಕುಟುಂಬದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಅಜ್ಮಲ್ ಅವರ ಇನ್‌ಸ್ಟಾಗ್ರಾಮ್ ಪುಟವು 14 ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ.
ತೀವ್ರ ಹೆಜ್ಜೆ ಇಡುವ ಮೊದಲು, ಅಜ್ಮಲ್ ತನ್ನ ಫೋಟೋ ಮತ್ತು ‘RIP ಅಜ್ಮಲ್ ಶೆರೀಫ್ 1995-2023’ ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಾಕಿದ್ದಾರೆ.