ಸುರತ್ಕಲ್ : ಡಿಸೆಂಬರ್ 11: ದ್ರಶ್ಯ ನ್ಯೂಸ್ :ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊರ್ವಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಸ್ಥಳಕ್ಕೆ ಸುರತ್ಕಲ್ ಪೊಲೀಸರು ಅಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.