ಉಡುಪಿ :ಡಿಸೆಂಬರ್ 21 :ಉಡುಪಿ ನಗರಸಭೆಯ 13ನೇ ಮೂಡು ಪೆರಂಪಳ್ಳಿ ವಾರ್ಡ್ನ ಉಪಚುನಾವಣೆಯು ಡಿಸೆಂಬರ್ 27ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಡಿ.26ರ ಬೆಳಗ್ಗೆ 6 ಗಂಟೆಯಿಂದ ಡಿ.27ರಮ ಮಧ್ಯರಾತ್ರಿ 12:00 ಗಂಟೆಯವರೆಗೆ ಪೆರಂಪಳ್ಳಿ ವಾರ್ಡ್ನ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.