ಕಾರ್ಕಳ , ಡಿ.23:ಡಿಸೆಂಬರ್ 28ರಂದು ಬೆಳಗ್ಗೆ 10:30ಕ್ಕೆ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಡಿಸೆಂಬರ್ 28ರಂದು ಬೆಳಗ್ಗೆ 10:30ಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಕಳ ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಅಹವಾಲುಗಳನ್ನು ಸಲ್ಲಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.