ಬೆಂಗಳೂರು : ಡಿಸೆಂಬರ್ 23:ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಂಡಿದ್ದು ಬಿಜೆಪಿ ಇದನ್ನು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.ಜೊತೆಗೆ ಹಿಂದೂ ಸಂಘಟನೆಗಳು ಕೂಡ ಇದನ್ನು ವಿರೋಧಿಸಿವೆ.
ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಸರ್ಕಾರ ಇನ್ನೂ ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಯಾರೋ ಒಬ್ಬರು ಪ್ರಶ್ನೆ ಮಾಡಿದ್ದಕ್ಕೆ ಆ ಉತ್ತರ ಕೊಟ್ಟಿದ್ದೇನೆ.
ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.