ಉಡುಪಿ :ಡಿಸೆಂಬರ್ 27: ದ್ರಶ್ಯ ನ್ಯೂಸ್ : ಗ್ರಹಲಕ್ಷ್ಮಿ ಯೋಜನೆ ಸಂಬಂಧ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದೆ.
ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ.
ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ.
ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪಂಚಾಯತ್ ರಾಜ್ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ.