ಬೆಂಗಳೂರು : ಡಿಸೆಂಬರ್ 28 ಬೋರ್ಡ್ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಧರಣಿ ಮಾಡಿದೆ. ನಗರದ ಲಾವೆಲ್ಲೆ ರಸ್ತೆಯನಲ್ಲಿ ಇಂಗ್ಲಿಷ್ ಫಲಕ ಒಡೆದಾಕಿದ್ದಕ್ಕೆ 15 ಕರವೇ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ 504, 506, 143, 147, 427 rw 41, PDLP Act 2a ಅಡಿ ಎಫ್ಐಆರ್ (FIR) ದಾಖಲು ಮಾಡಲಾಗಿದೆ. ಸದ್ಯ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
15 ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಕೂರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ವೇಳೆ ಯಲಹಂಕದಲ್ಲಿರುವ ಪೊಲೀಸ್ ಡ್ರೈವಿಂಗ್ ಸ್ಕೂಲ್ ಬಳಿಯ ರಸ್ತೆ ತಡೆದು ಮಹಿಳಾ ಕಾರ್ಯಕರ್ತೆಯರು ಹೈಡ್ರಾಮಾ ಮಾಡಿದ್ದಾರೆ.