ತುಮಕೂರು :ಡಿಸೆಂಬರ್ 28: ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಬುಧವಾರ ತಡರಾತ್ರಿ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರಿನ ನಂದಿಹಳ್ಳಿ ಬಳಿ ಅಪಘಾತಕ್ಕೀಡಾಗಿದೆ.ಅದೃಷ್ಟವಶಾತ್ ಸಚಿವರಿಗೆ ಏನೂ ಸಮಸ್ಯೆಯಾಗಿಲ್ಲ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಕಾರನ್ನು ಉಜ್ಜಿಕೊಂಡು ಹೋಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.ಎನ್ನಲಾಗಿದೆ